ತಲಪಾಡಿ ಟೋಲ್‌ಗೇಟ್‌ ನಲ್ಲಿ ಹಣ ಪಡೆದು ಕಾರು ಚಾಲಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ದೂರು ದಾಖಲು

2:33 PM, Thursday, November 30th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಕಾರು ಚಾಲಕರೋರ್ವರನ್ನು ತಲಪಾಡಿ ಟೋಲ್‌ಗೇಟ್‌ ಸಿಬ್ಬಂದಿ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಕಾರು ಚಾಲಕ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.

ಅಬ್ದುಲ್ ಕರೀಂ ಎಂಬವರ ಕಾರಿನ ಫಾಸ್ಟ್ ಟ್ಯಾಗ್ ನಿಂದ ಹಣ ಪಾವತಿಯಾದರೂ ಸಿಬ್ಬಂದಿ ಗೇಟ್ ತೆರೆಯದ ಕಾರಣ ಪ್ರಶ್ನಿಸಿದ್ದಾರೆ. ಈ ಸಂದರ್ಭ ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ಬೈದಿದ್ದು, ಇದನ್ನು ಪ್ರಶ್ನಿಸಿದ ಕರೀಂ ಅವರ ಮೇಲೆ ಕೋಪಗೊಂಡ ಸಿಬ್ಬಂದಿ, ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆಂದು ತಿಳಿದು ಬಂದಿದೆ.

ಈ ಬಗ್ಗೆ ಕರೀಂ ಅವರು ಟೋಲ್‌ಗೇಟ್ ಮ್ಯಾನೇಜರ್‌ ಮತ್ತು ಸಿಬ್ಬಂದಿ ವಿರುದ್ಧ ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English