ಅಗ್ನಿವೀರ್ ವಾಯು ಪ್ರವೇಶ – ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

8:54 PM, Thursday, June 30th, 2022
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋ ಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟುಮೆಂಟ್ ಟೆಕ್ನಾಲಜಿ ಹಾಗೂ ಇನ್‍ಫಾರ್‍ಮೆಶನ್ ಟೆಕ್ನಾಲಜಿಯಲ್ಲಿ ಶೇ.50ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಅಥವಾ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50ರಷ್ಟು ಅಥವಾ ಯಾವುದೇ ಪಿ.ಯು.ಸಿ ವಿಭಾಗದಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಅಭ್ಯರ್ಥಿಗಳು 1999ರ ಡಿ.29ರಿಂದ 2005ರ ಜೂ.29ರ ನಡುವೆ ಜನಿಸಿರಬೇಕು. 17 ವರ್ಷ 6 ತಿಂಗಳು ತುಂಬಿರುವ ಹಾಗೂ 23ವರ್ಷದೊಳಗಿನ ವಯೋಮಿತಿಯವರು 250ರೂ. ಶುಲ್ಕ ಪಾವತಿಸಿ ಅರ್ಜಿ ಪಡೆಯಬಹುದು. ಸಂಪೂರ್ಣ ವಿವರ ಹಾಗೂ ಸೂಚನೆಗಳನ್ನು ವೆಬ್‍ಸೈಟ್ https://indianairforce.nic.in ಮೂಲಕ ನೋಡಬಹುದು ಹಾಗೂ ಆನ್‍ಲೈನ್‍ನಲ್ಲಿ https://careerindianairforce.cdac.in. ಮೂಲಕ ಜು.5ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗಾಧಿಕಾರಿ ಅಥವಾ ದೂ.ಸಂಖ್ಯೆ: 0824-2457139 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English