ನಾಲ್ಕನೇ ಬಾರಿಗೆ ಕಂಪಿಸಿದ ಭೂಮಿ, ಭೀಕರ ಶಬ್ದಕ್ಕೆ ಮಧ್ಯರಾತ್ರಿ ಎಚ್ಚರಗೊಂಡು ಮನೆಯ ಹೊರಗೆ ಬಂದ ಜನರು

1:43 PM, Friday, July 1st, 2022
Share
1 Star2 Stars3 Stars4 Stars5 Stars
(No Ratings Yet)
Loading...

ಸುಳ್ಯ: ನಾಲ್ಕನೇ ಬಾರಿಗೆ ಮತ್ತೆ ಭೂಮಿ ಕಂಪಿಸಿದೆ. ಭೀಕರ ಶಬ್ದ ಮತ್ತು ಕಂಪನದಿಂದ ಮಲಗಿದ್ದ ಜನತೆ ಮಧ್ಯ ರಾತ್ರಿ ಎಚ್ಚರಗೊಂಡಿದ್ದಾರೆ. ರಾತ್ರಿ 1.15ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಸಂಪಾಜೆ ಹಾಗು ಸಮೀಪದ ಪ್ರದೇಶ, ಸುಳ್ಯ ನಗರ ಸೇರಿ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ ಬಗ್ಗೆ ಜನರು ಆತಂಕ ಗೊಂಡಿದ್ದಾರೆ.

ಇದೀಗ ವಾರದಲ್ಲಿ ನಾಲ್ಕನೇ ಬಾರಿ ಭೂಮಿ ಕಂಪಿಸಿದ್ದು ಜನರ ಆತಂಕ ಹೆಚ್ಚಿದೆ. ಜೂ.25 ರಂದು ಬೆಳಗ್ಗೆ 9.10ಕ್ಕೆ 2.3 ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಜೂ.28 ರಂದು ಎರಡು ಬಾರಿ ಭೂಮಿ ನಲುಗಿತ್ತು. ಬೆಳಗ್ಗೆ ರಿಕ್ಟರ್ ಸ್ಕೇಲ್‌ನಲ್ಲಿ 3 ತೀವ್ರತೆಯ ಹಾಗು ಸಂಜೆ 1.8 ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English