ಆದಿಚುಂಚನಗಿರಿ ಕಾಲೇಜಿನ ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

2:51 PM, Tuesday, December 5th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಶಿವಮೊಗ್ಗ: ಇಲ್ಲಿನ ಆದಿಚುಂಚನಗಿರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊವಳು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೇಘಾಶ್ರೀ (18) ಮೃತ ವಿದ್ಯಾರ್ಥಿನಿ. ಈಕೆ ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿ ಚುಂಚನಗಿರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

ಮೇಘಾಶ್ರೀ ಹೋಂ ಸಿಕ್‍ಗೆ ಒಳಗಾಗಿದ್ದಳು. ಇದೇ ಕಾರಣದಿಂದ ಈಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇತ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೇಘಾ ಶ್ರೀ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English