ಮಂಗಳೂರು : ಸ್ವಾಮಿ ವಿವೇಕಾನಂದರ 150ನೇ ವರ್ಷದಿನಾಚರಣೆಯ ಅಂಗವಾಗಿ ಶನಿವಾರ ನಗರದ ನೆಹರೂ ಮೈದಾನದಿಂದ ರಾಮಕೃಷ್ಣ ಮಠದವರೆಗೆ ಮೆರವಣಿಗೆಯನ್ನು ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ದ.ಕ.ಜಿಲ್ಲಾಧಿಕಾರಿ ಎನ್.ಪ್ರಕಾಶ್ ಮೆರವಣಿಗೆ ಚಾಲನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ರಾಮಕೃಷ್ಣ ಮಠ ಮಂಗಳೂರು, ದ.ಕ.ಜಿಲ್ಲಾ ಪಂಚಾಯತ್ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನೆಹರೂ ಮೈದಾನದ ಮೂಲಕ ನಡೆದ ಮೆರವಣಿಗೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು ಹಾಗೂ ವಿವೇಕಾನಂದರ ವೇಷ ಧರಿಸಿದ ಮಕ್ಕಳು ಮೆರವಣಿಗೆಯಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು.
ಶ್ರೀ ರಾಮಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿಟ್ಟೆ ವಿದ್ಯಾ ಸಂಸ್ಥೆಯ ಕುಲಪತಿ ಎನ್.ವಿನಯ್ ಹೆಗ್ಡೆ ಮಾತನಾಡಿ, ಯುವಕರು ವಿವೇಕಾನಂದರ ತತ್ವಾದರ್ಶಗಳನ್ನು ಪಾಲಿಸುವುದರ ಮೂಲಕ ತಮ್ಮ ಜೀವನವನ್ನು ಸಮೃದ್ಧ ಪಡಿಸಿಕೊಂಡು, ಸಮಾಜ ಸೇವೆಯಂತಹ ಕಾರ್ಯಗಳಲ್ಲಿ ತಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಮಕೃಷ್ಣ ಮಠದ ಅಧ್ಯಕ್ಷ ಜಿತಕಾಮಾನಂದಜೀ, ಜಿಲ್ಲಾಧಿಕಾರಿ ಎನ್.ಪ್ರಕಾಶ್, ಸಿ.ಟಿ.ರವಿ, ಡಾ.ಕೆ.ಎನ್.ವಿಜಯಪ್ರಕಾಶ್, ಸೆಂಚುರಿ ಗ್ರೂಪ್ ನ ಆಡಳಿತ ನಿರ್ದೆಶಕ ಪಿ.ದಯಾನಂದ ಪೈ, ಡಾ.ಜೀವರಾಜ್ ಸೊರಕೆ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English