ಮಂಗಳೂರು : “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದವವರನ್ನು ದಸ್ತಗಿರಿ ಮಾಡಿ 6 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.
ಮಂಗಳೂರು ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರು ನವಾಜ್(40), ವಾಸ: ಝೀದಾನ್ ಮಂಜಿಲ್, ಮಚ್ಚಂಪಾಡಿ, ಸಿ.ಎಮ್. ನಗರ, ಕೋಡಿ ಹೌಸ್,ಪಾವೂರು ಗ್ರಾಮ ಮತ್ತು ಪೋಸ್ಟ್, ಮಂಜೇಶ್ವರ ತಾಲೂಕು, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ಮತ್ತು ಅಜರುದ್ದೀನ್ @ ಅಜರ್(38), ವಾಸ: ಜುಮಾದಿ ಗುಡ್ಡೆ ಮನೆ, ಪುದು ಗ್ರಾಮ ಮತ್ತು ಅಂಚೆ, ಫರಂಗಿಪೇಟೆ, ಬಂಟ್ವಾಳ ತಾಲೂಕು.
ಬಂಧಿತರಿಂದ ಒಟ್ಟು 120 ಗ್ರಾಂ ತೂಕದ ರೂ. 6,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-3, ಡಿಜಿಟಲ್ ತೂಕ ಮಾಪನ, ಸುಝುಕಿ ಅಕ್ಸಿಸ್ ಸ್ಕೂಟರ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,83,120/- ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ನವಾಸ್ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಅಜರುದ್ದೀನ್ @ ಅಜರ್ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ 2 ಕಳ್ಳತನ ದಾಖಲಾಗಿರುತ್ತದೆ. ಹೀಗೆ ಒಟ್ಟು 5 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳ ಮತ್ತು ಮಾದಕ ವಸ್ತು ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.
Click this button or press Ctrl+G to toggle between Kannada and English