ಕಟೀಲು ಮೇಳಕ್ಕೆ ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟ್‌ ಅನುಮತಿ

9:15 PM, Tuesday, December 12th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಮೊದಲಿಂದಂತೆ ಬೆಳಗ್ಗಿನವರೆಗೆ ನಡೆಸಲು ಹೈಕೋರ್ಟು ಅನುಮತಿ ನೀಡಿದೆ.

ಕಟೀಲು ಮೇಳ ವಿಶೇಷ ಪ್ರಕರಣವೆಂದು ಭಾವಿಸಿ ರಾತ್ರಿ 12.30ರವರೆಗೆ ಮಾತ್ರ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ 2022ರ ನವೆಂಬರ್ 15ರಂದು ಎಂದು ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ದೇಗುಲದ ಭಕ್ತ ಕೃಷ್ಣಕುಮಾರ್‌ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದು ಕೋವಿಡ್‌ ಪೂರ್ವದಲ್ಲಿ ಚಾಲ್ತಿಯಲ್ಲಿ ಇದ್ದಂತೆ ಯಕ್ಷಗಾನ ಪ್ರದರ್ಶನ ನೀಡಲು ಜಿಲ್ಲಾಧಿಕಾರಿ ಅಥವಾ ಸಮಕ್ಷ ಪ್ರಾಧಿಕಾರವು ಅನುಮತಿ ನೀಡಬೇಕು. ಅರ್ಜಿದಾರರು ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮುಕ್ತವಾಗಿರುತ್ತಾರೆ ಎಂದು ಅದೇಶದಲ್ಲಿ ನ್ಯಾಯಮೂರ್ತಿ ತಿಳಿಸಿದ್ದಾರೆ.

ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English