ರಂಗಕರ್ಮಿ, ಸಮಾಜ ಸೇವಕ ಲೀಲಾಧರ ಶೆಟ್ಟಿ ಹಾಗೂ ಪತ್ನಿ ಆತ್ಮಹತ್ಯೆ

10:21 PM, Wednesday, December 13th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಉಡುಪಿ : ರಂಗಕರ್ಮಿ, ಸಮಾಜ ಸೇವಕ ಧಾರ್ಮಿಕ ಮುಂದಾಳು ಕಾಪು ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂದರಾ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಾಪುವಿನಲ್ಲಿರುವ ಅವರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದು, ದಂಪತಿ ಸಮಾಜ ಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಬಹಳ ಸಕ್ರೀಯರಾಗಿದ್ದರು. ಲೀಲಾಧರ ಶೆಟ್ಟಿಯವರು ರಂಗಕರ್ಮಿಯಾಗಿದ್ದು, ರಂಗತರಂಗ ನಾಟಕ ತಂಡದವನ್ನು ಬೆಳೆಸಿದ್ದರು. ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸಹ ಸ್ಪರ್ಧಿಸಿದ್ದರು.

ದಂಪತಿ ಕೌಟುಂಬಿಕ ಕಾರಣಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English