ಪುತ್ತೂರು: ಯುವ ವಿಜ್ಞಾನಿ ಯೋರ್ವರು ಎರಡು ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕೆ ಸೇರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಗುರುವಾರ ನಡೆದಿದೆ.
ಮೃತ ಯುವಕನನ್ನು ಕಲ್ಲರ್ಪೆ ನಿವಾಸಿ ಭರತ್ (24) ಎಂದು ಗುರುತಿಸಲಾಗಿದೆ.
ಎರಡು ತಿಂಗಳ ಹಿಂದೆಯಷ್ಟೇ ಅವರು ಹೈದರಾಬಾದ್ ನ ಡಿಆರ್ ಡಿಒ ಎಂಬ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಊರಿಗೆ ಆಗಮಿಸಿದ್ದರು. ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ ಮಾಡಿರಲಿಲ್ಲ ಎನ್ನಲಾಗಿದೆ.
ಬುಧವಾರ ರಾತ್ರಿ ಡಿಆರ್ ಡಿಒ ಕಛೇರಿಯಿಂದ ಫೋನ್ ಬಂದಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದು, ಆ ಬಳಿಕ ಮಲಗಿದ್ದ ಭರತ್ ಅವರು ತಡರಾತ್ರಿ ಈ ಕೃತ್ಯ ಎಸಗಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English