ಯುವತಿಯರನ್ನು ಬಳಸಿಕೊಂಡು ಮನೆಯೊಂದರಲ್ಲಿ ವೇಶ್ಯಾವಾಟಿಕೆ, ಐವರ ಬಂಧನ

10:27 PM, Friday, December 15th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಕಾರ್ಕಳ : ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸರು ಗುರುವಾರ ದಾಳಿ ನಡೆಸಿ ಓರ್ವ ಮಹಿಳೆಯನ್ನು ರಕ್ಷಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪಟ್ಲ ದಾನಿಯಾ ಪಿರೇರಾ ಎಂಬವರ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ದೂರಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಇಲ್ಲಿ ಮಹಿಳೆಯರನ್ನು ಹಾಗೂ ಯುವತಿಯರನ್ನು ಬಳಸಿಕೊಂಡು ಅನೈತಿಕ ದಂಧೆ ವ್ಯವಹಾರ ನಡೆಸುತ್ತಿದ್ದ ಕಾರ್ಕಳದ ಗೋವರ್ಧನ, ಎಣ್ಣೆಹೊಳೆ ಶಿವಕೃಪಾ ನಿವಾಸಿ ಉಪೇಂದ್ರ ಯಾನೆ ಅವಿನಾಶ್ ನಾಯ್ಕ್, ಉಡುಪಿ ತಾಲೂಕಿನ ದೀಪಾ, ಅಶೋಕ್ ಕಾರ್ಕಳ ಹಾಗೂ ಕುಕ್ಕುಂದೂರು ಗ್ರಾಮದ ನಕ್ರೆ ಕಿನ್ನರಕಟ್ಟೆ ಪ್ರವೀಣ್ ಪೂಜಾರಿ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.

ಈ ದಂಧೆಗೆ ಬಳಸಿಕೊಂಡಿದ್ದ ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಿಸಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English