ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ ಸಂಬಂಧಿ ಕಾಯಿಲೆಗೆ ಬಂದಿರುವ ಅವರನ್ನು ರಾಟ್ ಟೆಸ್ಟ್ ಮಾಡಿಸಿದಾಗ ಅದರಲ್ಲಿ ಪಾಸಿಟಿವ್ ಪತ್ತೆಯಾಗಿದೆ.
ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು. ಅವರನ್ನು ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಲಾಗಿದ್ದು ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
Click this button or press Ctrl+G to toggle between Kannada and English