ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ಕ್ಷೇತ್ರ ಸಮಿತಿಯ ವತಿಯಿಂದ ಸುರತ್ಕಲ್ ಪೊಲೀಸ್ ಠಾಣೆಗೆ ಆರ್‌ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ನೀಡಿದೆ.
ಮಹಿಳೆಯರನ್ನು ಅವಮಾನಿಸಿ, ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಾತನಾಡಿದ್ದಾರೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ದೂರಿನಲ್ಲಿ ಮಹಿಳೆಯರು ಹೇಳಿದ್ದಾರೆ.
ಕೋಮುಗಲಭೆಗೆ ಪ್ರಭಾಕರ ಭಟ್ ಪ್ರಚೋದನೆ ನೀಡಿದ್ದಾರೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ನೀಡಿರುವ ದೂರಿನಲ್ಲಿ ತಿಳಿಸಿದೆ.
Click this button or press Ctrl+G to toggle between Kannada and English