ಬೀಚ್ ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ 10ಕ್ಕೆ ಮುಕ್ತಾಯ : ಪೊಲೀಸ್ ಕಮಿಷನರ್

7:00 PM, Saturday, December 30th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಹೊಸ ವರ್ಷಾಚರಣೆ ಯನ್ನು ಆಚರಿಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಕಲ ರೀತಿಯ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಚರ್ಚ್, ಹೊಟೇಲ್, ರೆಸ್ಟೋರೆಂಟ್, ಖಾಸಗಿ ಸಭಾಂಗಣ ಸೇರಿದಂತೆ ಒಳಾಂಗಣಗಳಲ್ಲಿಕಾರ್ಯಕ್ರಮ ನಡೆಸಲು ಕೋರಿ 36 ಅರ್ಜಿಗಳು ಬಂದಿವೆ. ಹಲವು ನಿಬಂಧನೆಗಳೊಂದಿಗೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದ್ದು, ಒಳಾಂಗಣದಲ್ಲಿ ಕಾರ್ಯಕ್ರಮ ನಡೆಸುವವರು ಮಧ್ಯರಾತ್ರಿ 12.30ರವರೆ ಅವಕಾಶ ನೀಡಲಾಗಿದೆ ಎಂದರು.

ಬೀಚ್ ಅಥವಾ ಇತರೆಡೆ ಹೊರಾಂಗಣಗಳಲ್ಲಿ ಕಾರ್ಯಕ್ರಮ ನಡೆಸುವವರು 10ಕ್ಕೆ ಮುಕ್ತಾಯಗೊಳಿಸಬೇಕು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂಪೂರ್ಣ ನಿಗಾ ವಹಿಸಲಿದ್ದು, 17 ಹೊಯ್ಸಳ ವಾಹನ ಸೇರಿದಂತೆ 66 ಸೆಕ್ಟರ್ ಮೊಬೈಲ್ ಘಟಕಗಳು ಕಾರ್ಯಾಚರಣೆಯಲ್ಲಿರಲಿವೆ. 106 ಪಾಯಿಂಟ್‌ಗಳಲ್ಲಿ ಎಸಿಪಿ ದರ್ಜೆಯಿಂದ ಹಿಡಿದು ಅಧಿಕಾರಿ, ಸಿಬ್ಬಂದಿ ಮೇಲ್ವಿಚಾರಣೆ ನಡೆಸಲಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಸಿವಿಲ್ ಹಾಗೂ ಟ್ರಾಫಿಕ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಸೇರಿದಂತೆ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ವಹಿಸಲಿದ್ದಾರೆ.

ಡ್ರಗ್ಸ್ ವಿರುದ್ಧವೂ ನಾಲ್ಕು ತಂಡಗಳು ಕಾರ್ಯಾಚರಿಸಲಿದ್ದು, ಮದ್ಯ ಸೇವನೆ ಮತ್ತು ಸಾಗಾಟ- ಮಾರಾಟದ ಮೇಲೆ ನಿಗಾ ವಹಿಸಲಿದ್ದಾರೆ. ಬೀಚ್‌ಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಆಗದಂತೆ ಮುಂಜಾಗೃತಾ ಕ್ರಮಗಳ ಜತೆಗೆ ಲೈಟಿಂಗ್ ವ್ಯವಸ್ಥೆಗೂ ಕ್ರಮ ವಹಿಸಲಾಗಿದೆ. 112 ಸೇರಿದಂತೆ ಸ್ಥಳೀಯ ಅಧಿಕಾರಿಗಳು ನೇರವಾಗಿ ಸಂಪರ್ಕಕ್ಕೆ ಸಹಕಾರಿ ಆಗುವಂತೆ ಕ್ರಮ ವಹಿಸಲಾಗಿದೆ ಎಂದ ಅವರು ವಿವರ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಡಿಸಿಪಿಗಳಾದ ದಿನೇಶ್ ಕುಮಾರ್, ಸಿದ್ಧಾರ್ಥ್ ಗೋಯಲ್ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English