ಬೋಳೂರು ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ ?

8:13 PM, Thursday, January 4th, 2024
Share
1 Star2 Stars3 Stars4 Stars5 Stars
(5 rating, 1 votes)
Loading...

ಮಂಗಳೂರು: ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಕಾರ್ಪೊರೇಟರ್ , ಬಿಜೆಪಿ ನಾಯಕ ಜಗದೀಶ್ ಶೆಟ್ಟಿ ಗುರುವಾರ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ.

ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಹಳೇ ಮಂಜುರನ್ ಹೋಟೆಲ್ ಮುಂಭಾಗದಲ್ಲಿ ಕಾರಿನಲ್ಲಿ ಕುಳಿತು ಜಗದೀಶ್ ಶೆಟ್ಟಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅವರಿಗೆ ಫುಡ್ ಪಾಯಿಸನ್ ಆಗಿ ಕಾರಲ್ಲಿ ಪ್ರಜ್ಞೆ ತಪ್ಪಿದ್ದರು ಎಂದೂ ಹೇಳಲಾಗುತ್ತಿದೆ.

ಕಾರಿನೊಳಗೆ ಇದ್ದ ಅವರನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಗಾಜು ಒಡೆದು ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಕೆ ಎಂ ಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English