ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ಲೈನ್‌ಮ್ಯಾನ್‌ ಮೃತ್ಯು

8:11 PM, Friday, January 5th, 2024
Share
1 Star2 Stars3 Stars4 Stars5 Stars
(5 rating, 1 votes)
Loading...

ಕಡಬ : ಮೆಸ್ಕಾಂ ಲೈನ್‌ಮ್ಯಾನ್‌ ಒಬ್ಬರು ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪಂಜ ಸೆಕ್ಷನ್‌ನ ಬಳ್ಪದ ಪಾದೆ ಎಂಬಲ್ಲಿ ವರದಿಯಾಗಿದೆ.

ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್. (32) ಮೃತರು ಎಂದು ಗುರುತಿಸಲಾಗಿದೆ.

ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಘು ಎಸ್.ಆರ್ ಅವರು ಕಳೆದ ಸುಮಾರು 1.5 ವರುಷಗಳಿಂದ ಪಂಜ ಮೆಸ್ಕಾಂ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು .

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English