ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದಾಗ ಎಂಟ್ರಿ ಕೊಟ್ಟ ಮಾಜಿ ಪ್ರೇಯಸಿ

9:32 PM, Friday, January 5th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಪ್ರೇಯಸಿಗೆ ಮೋಸಮಾಡಿ ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಎಂಟ್ರಿಕೊಟ್ಟ ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದ ಉಳ್ಳಾಲ ತಾಲೂಕಿನ ಬೀರಿ ಬಳಿ ಶುಕ್ರವಾರ ನಡೆದಿದೆ.

ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ರಂಪಾಟ ನಡೆಸಿದ್ದಾಳೆ.

ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ. ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.

ಪ್ರಕರಣ ಸಂಬಂಧ ಅರೋಪಿ ಅಕ್ಷಯ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರನ ಯುವತಿ ಜೊತೆ ಅಕ್ಷಯ್​ಗೆ ವಿವಾಹ ನಿಶ್ಚಯವಾಗಿದೆ. ಬೀರಿಯ ಖಾಸಗಿ ಹಾಲ್​ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್​ ಮುಂಭಾಗದಲ್ಲಿ ಪ್ರೇಯಸಿ ಕೂಗಾಟ ನಡೆಸಿದ್ದಾಳೆ.

ಮಂಗಳೂರು ಯುವತಿಗೆ ತಾಳಿ ಕಟ್ಟಿದ ಅಕ್ಷಯ್ ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English