ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ‌ ದೌರ್ಜನ್ಯ ಕೇಸ್

11:07 PM, Sunday, January 7th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : (ಮುಡಾ) ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರು ಅಲಿ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ‌ ದೌರ್ಜನ್ಯ ಆರೋಪದ ದೂರು ದಾಖಲಿಸಿದ್ದಾರೆ.

ಮುಡಾ ದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಬೆರಳಚ್ಚುಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೂಡಾ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ, ಜನವರಿ 6ರಂದು ಉರ್ವ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಿಸಿದ್ದಾರೆ.

ಹೀಗಾಗಿ ಐಪಿಸಿ ಸೆಕ್ಷನ್‌ 354, 354Aರಡಿ ಕೇಸ್ ದಾಖಲಿಸಿ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ ಎಂದು ಪೋಲಿಸ್ ಆಯುಕ್ತ ಅನುಪಮ್ ಅಗರವಾಲ್ ಹೇಳಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English