ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ ಹೆಗ್ಡೆ ನಿಧನ

8:59 PM, Tuesday, January 16th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ. ರಮಾನಾಥ ಹೆಗ್ಡೆ (72) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.

ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 31ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರ ಅಂತಿಮ ದರ್ಶನ ಜ.17ರಂದು ಮಂಗಳಾದೇವಿ ದೇವಸ್ಥಾನ ಸಮೀಪದ ಸ್ವಗೃಹದಲ್ಲಿ ಬೆಳಗ್ಗೆ 8.00 ರಿಂದ 11.00 ವರೆಗೆ ನಡೆಯಲಿದೆ. 11.30ಕ್ಕೆ ನಂದಿಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಸಂತಾಪ: ರಮಾನಾಥ ಹೆಗ್ಡೆ ಅವರ ನಿಧನಕ್ಕೆ ಅನುವಂಶಿಕ ಮೊಕ್ತೇಸರರಾದ ರಘುರಾಮ್ ಉಪಾಧ್ಯಾಯ, ಎಸ್. ಹರೀಶ್ ಐತಾಳ್, ಎಂ. ಅರುಣ್ ಐತಾಳ್, ಶ್ರೀನಿವಾಸ್ ಐತಾಳ್, ಪರ್ಯಾಯ ಅರ್ಚಕರಾದ ವಾಸುದೇವ ಐತಾಳ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮೀನುಗಾರ ಮುಖಂಡ ನಿತಿನ್ ಕುಮಾರ್, ಟ್ರಸ್ಟಿ ಪ್ರೇಮಲತಾ ಎಸ್. ಕುಮಾರ್, ಮಂಗಳಾದೇವಿ ಸೇವಾ ಸಮಿತಿ ಅಧ್ಯಕ್ಷ ದಿಲ್‌ರಾಜ್ ಆಳ್ವ, ಮಾಜಿ ಅಧ್ಯಕ್ಷ ಬಿ. ಅಶೋಕ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English