- Mega Media News Kannada - https://kannada.megamedianews.com -

ಶಿಬಾಜೆ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಮರ ಕಡಿಯುತ್ತಿದ್ದ ನಾಲ್ವರ ಬಂಧನ

[1]

ಕೊಕ್ಕಡ : ಶಿಬಾಜೆ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಬೆಲೆಬಾಳುವ ಮರ ಕಡಿಯುತ್ತಿದ್ದ ನಾಲ್ವರನ್ನು ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಬಂಧಿತರನ್ನು ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)‌ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್‌ (45) ಎಂದು ಗುರುತಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್, ವಾಹನ ಚಾಲಕ ಕಿಶೋರ್ ಭಾಗಿಯಾಗಿದ್ದಾರೆ.

ಇನ್ನು ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ಎದುರು ಹಾಜರುಪಡಿಸಲಾಗಿದೆ.