ವಿದ್ಯಾ ಚೌಡೇಶ್ವರಿ ದೇವಿಗೆ 2 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ ಹೆಚ್​​ಡಿ ದೇವೇಗೌಡ

9:05 PM, Wednesday, January 17th, 2024
Share
1 Star2 Stars3 Stars4 Stars5 Stars
(No Ratings Yet)
Loading...

ತುಮಕೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​​ಡಿ ದೇವೇಗೌಡ ಅವರು ವಿದ್ಯಾ ಚೌಡೇಶ್ವರಿ ದೇವಿಗೆ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ವಜ್ರ ಖಚಿತ ಕಿರೀಟ ಅರ್ಪಿಸಿದ್ದಾರೆ.

ವಿದ್ಯಾ ಚೌಡೇಶ್ವರಿ ದೇವಿ ದೇವಸ್ಥಾನ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿ ಹಂಗರಹಳ್ಳಿಯಲ್ಲಿದ್ದು, ವಜ್ರ ಕೀರಿಟ ಅರ್ಪಿಸಿ ಬಳಿಕ ಹೋಮದಲ್ಲಿ ಭಾಗಿಯಾದರು.

ಚ್​​ಡಿ ದೇವೇಗೌಡ ಅವರು ವಿದ್ಯಾ ಚೌಡೇಶ್ವರಿಯ ಉತ್ತರಾಯಣ ದಲ್ಲಿ ನಡೆಯುವ ವರ್ಧಂತಿ ಉತ್ಸವ ಮತ್ತು ಅಮ್ಮನವರ ಚಿಕ್ಕಮ್ಮ ಜಾತ್ರೆಯು ಯಲ್ಲಿ ಭಾಗವಹಿಸಿ, ಉಪವಾಸ ವ್ರತ ಕೈಗೊಂಡು ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ.

ನನ್ನ ಎರಡು ಮಂಡಿ ಚೆನ್ನಾಗಿಲ್ಲ, ಆದರೂ ಕೂಡ ದೀರ್ಘ ದಂಡ ನಮಸ್ಕಾರ ಮಾಡಿದ್ದೇನೆ. ಇಲ್ಲಿ ನಡೆದಂತಹ ಹೋಮ ಅತ್ಯಂತ ವಿಶೇಷವಾಗಿತ್ತು. ಶ್ರೀ ವಿದ್ಯಾ ಚೌಡೇಶ್ವರಿ ದೇವಿಗೆ ಒಂದು ಕಿರೀಟ ಧಾರಣೆ ಮಾಡಿಸಿದ್ದೇನೆ. ಶ್ರೀ ಚೌಡೇಶ್ವರಿ ದೇವಿಯ ಶಕ್ತಿಯಿಂದಾಗಿ ಮೂರು ಬಾರಿ ನಾನು ಪ್ರದಕ್ಷಿಣೆ ಹಾಕಿದ್ದೇನೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಹಿಂದೆ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದರು. ನನಗೂ ಇಲ್ಲಿ ಹೋಗುವಂತೆ ಹೇಳಿದರು, ಹಾಗಾಗಿ ಬಂದು ಪೂಜೆ ಸಲ್ಲಿಸಿದ್ದೇನೆ ಎಂದು ದೇವೇಗೌಡ ಹೇಳಿದ್ದಾರೆ.

ನಾನು ಅಯೋಧ್ಯೆಗೆ ಹೋಗಬೇಕೆಂಬ ಇಚ್ಛೆ ಇದೆ. ಹೋಗುವ ಪ್ರಯತ್ನ ಮಾಡುತ್ತೇನೆ. ಆರೋಗ್ಯ ನೋಡಿಕೊಳ್ಳಬೇಕಾಗಿದೆ. ಈ ನಡುವೆ ನಿಜವಾಗಿಯೂ ಹೋಗುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English