ಕೆಸರಿನಲ್ಲಿ ಹೂತು ಮೃತಪಟ್ಟ ಯುವಕ

11:45 PM, Thursday, July 21st, 2022
Share
1 Star2 Stars3 Stars4 Stars5 Stars
(No Ratings Yet)
Loading...

ಬಂಟ್ವಾಳ: ಗದ್ದೆಯಲ್ಲಿ ಶಂಕಹುಳು ಹೆಕ್ಕುವ ವೇಳೆ ಯುವಕನೋರ್ವ ಕೆಸರಿನಲ್ಲಿ ಹೂತು ಮೃತಪಟ್ಟ ಘಟನೆ ಪೊಳಲಿ ಸಮೀಪದ ಕಲ್ಕುಟದ ಗದ್ದೆಯೊಂದರಲ್ಲಿ ಬುಧವಾರ ನಡೆದಿದೆ.

ಕರಿಯಂಗಳ ಗ್ರಾಮದ ಸಾಣೂರುಪದವು ನಿವಾಸಿ ದಾಮೋದರ್(31) ಮೃತಪಟ್ಟ ಯುವಕ.

ದಾಮೋದರ್‌ ಗದ್ದೆಯ ಬದಿಯಲ್ಲಿ ಕೂತು ನರ್ತೆ ಹೆಕ್ಕುತ್ತಿದ್ದ ವೇಳೆ ಆಯತಪ್ಪಿ ಗದ್ದೆಗೆ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿನ ಜತೆಗೆ ಕೆಸರು ಕೂಡ ತುಂಬಿಕೊಂಡಿದ್ದು, ಈ ವೇಳೆ ಅವರ ಕುತ್ತಿಗೆವರೆಗೂ ಹೂತು ಹೋಗಿದ್ದಾರೆ. ಬಳಿಕ ಮೇಲಕ್ಕೆ ಬರಲು ಆಗದೆ ಮೃತಪಟ್ಟಿದ್ದಾರೆ.

ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದ ದಾಮೋದರ್ ಅವರು ತಂದೆ-ತಾಯಿ, ಪತ್ನಿ, ಸಣ್ಣ ಮಗು ಸೇರಿದಂತೆ ಕುಟುಂಬ ವರ್ಗವನ್ನು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English