ಕದ್ರಿ ಪಾರ್ಕ್‌ಗೆ ಬಂದಿದ್ದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಥಳಿಸಿದ ಮೂವರ ತಂಡ

9:32 PM, Friday, January 19th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಕದ್ರಿ ಪಾರ್ಕ್‌ಗೆ ಬಂದಿದ್ದ ಯೆನೆಪೋಯ ಬಿ ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಮತ್ತು ಜಿ ಏನ್ ಎಂ ನರ್ಸಿಂಗ್ ಕಾಲೇಜು ನಂತೂರು ಇದರ ವಿದ್ಯಾರ್ಥಿಯನ್ನು ಶುಕ್ರವಾರ ಬೆಳಗ್ಗೆ ಮೂವರು ಯುವಕರ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ನಿತಿನ್ (18), ಹರ್ಷಾ (18) ಮತ್ತು ತಂಡದಲ್ಲಿದ್ದ ಬಾಲಕನನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ಬೆಳಗ್ಗೆ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿ ಮತ್ತು ದೇರಳಕಟ್ಟೆಯ ನರ್ಸಿಂಗ್ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ದೇರಳಕಟ್ಟೆಯಿಂದ ಜೊತೆಯಾಗಿ ಬಸ್‌ನಲ್ಲಿ ಮಂಗಳೂರಿಗೆ ಬಂದಿದ್ದರು. ಅದೇ ಬಸ್‌ನಲ್ಲಿ ಅವರನ್ನು ಹಿಂಬಾಲಿಸುತ್ತಾ ಬಂದ ತಂಡ ಇವರು ಕದ್ರಿ ಪಾರ್ಕ್‌ಗೆ ಹೋಗುತ್ತಿದ್ದಾಗ ಪಾರ್ಕ್ ರಸ್ತೆಯಲ್ಲೇ ತಡೆದು ಹಲ್ಲೆ ನಡೆಸಿ ಫೋಟೋ ಮತ್ತು ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.

ಮಾಹಿತಿ ಪಡೆದ ಕದ್ರಿ ಠಾಣಾ ಪಿಎಸ್‌ಐ ಉಮೇಶ್ ಕುಮಾರ್ ಹಾಗೂ ತಂಡ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳಿಬ್ಬರನ್ನು ರಕ್ಷಿಸಿದ್ದಾರೆ. ಹಲ್ಲೆ ನಡೆಸಿದ ತಂಡದಲ್ಲಿದ್ದ ಬಾಲಕ ಸಹಿತ ಮೂವರನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ .

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಐಪಿಸಿ 341,504,509, 354(b), 354(d) 34 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English