ಜಾತ್ರೆಗಳಲ್ಲಿ ಜೂಜಿನ ಕೋಳಿ ಅಂಕವನ್ನು ನಡೆಸಲು ಅವಕಾಶವಿಲ್ಲ

9:03 PM, Tuesday, January 30th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಕಾನೂನುಬಾಹಿರ ಜೂಜಿನ ಕೋಳಿ ಅಂಕವನ್ನು ನಡೆಸಲು ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು, ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದರು.

ಕಾನೂನುಬಾಹಿರ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೋಳಿ ಜಗಳ
ಜಿಲ್ಲಾ ಪಂಚಾಯತ್‌ನಲ್ಲಿ ನಡೆದಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಹರೀಶ್ ಪೂಂಜಾ ಹಾಗೂ ಅಶೋಕ್‌ ರೈ ನಡುವೆ ಕೋಳಿ ಅಂಕದ ಪರವಾನಿಗೆ ವಿಚಾರವಾಗಿ ಚರ್ಚೆ ನಡೆದಿತ್ತು.

ದೈವ ದೇವಸ್ಥಾನಗಳ ಜಾತ್ರೆಯ ಹಿನ್ನಲೆಯಲ್ಲಿ ನಡೆಯುವ ಕೋಳಿ ಅಂಕಕ್ಕೆ ಪೊಲೀಸ್ ಇಲಾಖೆ ಪರ್ಮಿಷನ್ ನೀಡುತ್ತಿಲ್ಲ ಎಂಬ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಈ ವೇಳೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮದ್ಯ ಪ್ರವೇಶ ಮಾಡಿ ಕಾನೂನಿನಲ್ಲಿ ಪೊಲೀಸರಿಗೆ ಪರ್ಮಿಷನ್ ನೀಡುವ ಅವಕಾಶ ಇಲ್ಲ ಹಾಗಂತ ಜೂಜಿನ ಕೋಳಿ ಅಂಕಕ್ಕೆ ಪರ್ಮಿಷನ್ ಇಲ್ಲ ಎಂದು ಹೇಳಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English