ಮಂಗಳೂರು : ಉಳ್ಳಾಲದಲ್ಲಿ ಠಾಣೆಯಲ್ಲಿ ತಾಯಿ ಹಾಗೂ ಆಕೆಯ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಯನ್ನು ಸಾಕ್ಷ್ಯಾಧಾರ ಕೊರತೆಯ ಕಾರಣದಿಂದ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಬಿಡುಗಡೆಗೊಳಿಸಿದೆ.
2021ರಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಬೂಬಕ್ಕರ್ ಸಿದ್ದಿಕ್ ಯಾನೆ ಸಿದ್ದಿಕ್ ಉಳ್ಳಾಲ್ ಎಂಬವವನನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ನೀಡಿದೆ .
ಆರೋಪಿಯು ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ ಎಂದು ಪ್ರಾಥಮಿಕ ತನಿಖೆ ನಡೆಸಿದ ಉಳ್ಳಾಲ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಆದರೆ ಸಾಕ್ಷ್ಯಾಧಾರ ಅಪರಾಧವನ್ನು ಸಾಬೀತುಮಾಡಲು ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ಮಾನ್ಯ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ನೀಡಿತು.
ಮಂಗಳೂರಿನ ವಿಶೇಷ ಪೋಕ್ಸೊ ಮತ್ತು ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಆರೋಪಿಯ ಪರವಾಗಿ ಮಂಗಳೂರಿನ ಲೆಕ್ಸ್ ಜ್ಯೂರೀಸ್ ಲಾ ಚೇಂಬರ್ ಇದರ ವಕೀಲರಾದ ಓಮರ್ ಫಾರೂಕ್ ಮುಲ್ಕಿ, ಮಹಮ್ಮದ್ ಅಸ್ಗರ್ ಮುಡಿಪು, ಹೈದರ್ ಅಲಿ ಕಿನ್ನಿಗೋಳಿ , ತೌಸೀಪ್ ಸಚ್ಚರಿಪೇಟೆ, ಮುಹಮ್ಮದ್ ರಿಫಾಝ್ ಬೆಂಗ್ರೆರವರು ವಾದಿಸಿದ್ದರು.
Click this button or press Ctrl+G to toggle between Kannada and English