ಹಾಲಿನ ಡೈರಿಗಳ ಸಂಖ್ಯೆಯನ್ನು ಹೆಚ್ಚಿಸಲು ಮಧ್ಯಂತರ ಬಜೆಟ್ ನಲ್ಲಿ ಆದ್ಯತೆ

2:56 PM, Thursday, February 1st, 2024
Share
1 Star2 Stars3 Stars4 Stars5 Stars
(No Ratings Yet)
Loading...

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ್ದು, ದೇಶದಲ್ಲಿ ಹಾಲು ಮತ್ತು ಡೈರಿ ಉತ್ಪಾದನೆಯನ್ನು ಹೆಚ್ಚಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ.

ಭಾರತ ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಷ್ಟ್ರವಾಗಿದೆ. ಆದರೆ ಕಡಿಮೆ ಉತ್ಪಾದಕತೆ ಹೊಂದಿದೆ. ಹೀಗಾಗಿ ಡೈರಿಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವೆ ಹೇಳಿದ್ದಾರೆ.

2022-23ರಲ್ಲಿ ಭಾರತದ ಹಾಲಿನ ಉತ್ಪಾದನೆಯು 230.58 ಮಿಲಿಯನ್ ಟನ್‌ಗಳಿಗೆ ಅಂದರೆ ಶೇ. 4 ರಷ್ಟು ಏರಿಕೆಯಾಗಿದೆ.

ಎಣ್ಣೆಕಾಳುಗಳ ಉತ್ಪಾದನೆಗೆ ಆತ್ಮ ನಿರ್ಭರತ್ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೃಷಿ ವಲಯದಲ್ಲಿ ಮೌಲ್ಯವರ್ಧನೆ ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಪ್ರಯತ್ನಗಳನ್ನು ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಈ ಬಾರಿಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ವಲಯಕ್ಕೆ 11 ಲಕ್ಷ ಕೋಟಿ ರೂ ಮೀಸಲಿಟ್ಟಿದ್ದಾರೆ.

ಇದು ಕಳೆದ ಬಾರಿಗಿಂತ ಶೇ.11ರಷ್ಟು ಹೆಚ್ಚಾಗಿದೆ. ಇದು ಜಿಡಿಪಿಯ ಶೇ.3.4ರಷ್ಟಿದೆ. ಕಳೆದ ಬಜೆಟ್​ನಲ್ಲಿ 5.93 ಲಕ್ಷ ಕೋಟಿ ರೂಪಾಯಿ ಮೀಸಲಿಸಲಾಗಿತ್ತು. ಇದು ಜಿಡಿಪಿಯ ಶೇ.1.9ರಷ್ಟಿತ್ತು.

ಸದ್ಯ ಜಗತ್ತಿನ ಎರಡು ಪ್ರದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಉಂಟಾಗಿದೆ. ಗಾಜಾ-ಉಕ್ರೇನ್ ಮತ್ತು ಇಸ್ರೇಲ್-ಹಮಾಸ್ ನಡುವೆ ಯುದ್ಧ ನಡೆಯುತ್ತಿದೆ. ಈ ಹಿನ್ನೆಲೆ ಬಜೆಟ್​ನಲ್ಲಿ ರಕ್ಷಣಾ ವಲಯಕ್ಕೆ ಹೆಚ್ಚಿನ ಅನುದಾನ ನೀಡುವ ಅಗತ್ಯವಿದೆ ಎಂದು ರಕ್ಷಣಾ ತಜ್ಞ ಏರ್​​​​ವೇಸ್​​ ಮಾರ್ಷಲ್‌ ಮನೋಹರ್‌ ಬಹದ್ದೂರ್‌ ಅಭಿಪ್ರಾಯಪಟ್ಟಿದ್ದರು.

2022ರಲ್ಲಿ ಶಸ್ತ್ರಾಸ್ತ್ರಗಳಿಗಾಗಿಯೇ 1.52 ಲಕ್ಷ ಕೋಟಿ ರೂ. ಹಣವನ್ನು ಮೀಸಲಿಟ್ಟಿತ್ತು. ಇದರಲ್ಲೀಗ ಶೇ.6.5ರಷ್ಟು ಹೆಚ್ಚಳಗೊಂಡಿದೆ. 2022-23ರಲ್ಲಿ ಶೇ. 12 ಮತ್ತು 2021-22ರಲ್ಲಿ ಶೇ.19ರಷ್ಟಿತ್ತು.

ಸದ್ಯ ಭಾರತ 85 ದೇಶಗಳಿಗೆ ತನ್ನ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ. 2016ಕ್ಕೆ ಹೋಲಿಸಿದರೆ ಭಾರತದ ರಕ್ಷಣಾ ರಫ್ತು 10 ಪಟ್ಟು ಹೆಚ್ಚಾಗಿದೆ. ನೌಕಾಪಡೆಗೆ 26 ರಫೇಲ್ ವಿಮಾನಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ.

31 MQ-9B ರೀಪರ್ ಡ್ರೋನ್‌ಗಳನ್ನು ಖರೀದಿಸಲು ಅಮೆರಿಕದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತ ಮತ್ತು ಅಮೆರಿಕ ಜಂಟಿಯಾಗಿ ಸ್ಟ್ರೈಕರ್ ಶಸ್ತ್ರಸಜ್ಜಿತ ಯುದ್ಧ ವಾಹನವನ್ನು ನಿರ್ಮಿಸಲು ಒಪ್ಪಿಕೊಂಡಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English