ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್

2:07 PM, Monday, February 5th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಹರಕೆ ಕೋಲ ನೆರವೇರಿಸಿದ್ದಾರೆ.

ಸ್ಥಳೀಯ ಮುಖಂಡರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್, ಸಂಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ.

ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English