ಮಂಗಳೂರು : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜು.28ರ ಗುರುವಾರ ಸಂಜೆ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಪ್ರವೀಣ್ ಹತ್ಯೆ ಆರೋಪಿಗಳ ಬಂಧನ ಶೀಘ್ರದಲ್ಲೇ ಆಗಲಿದೆ. ಇದರ ಹಿಂದಿರುವ ಶಕ್ತಿಗಳು ಯಾರೇ ಇರಲಿ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ,ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಂಸದರಾದ ನಳೀನ್ ಕುಮಾರ್ ಕಟೀಲ್, ನಾಯಕರಾದ ಸಿ.ಟಿ ರವಿ, ಶಾಸಕರಾದ ಸಂಜೀವ್ ಮಠಂದೂರು, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English