ಸಹಕಾರ ಸಂಘದಲ್ಲಿ ನಕಲಿ ಚಿನ್ನವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ ಇಬ್ಬರಿಗೆ ಶೋಧ

8:29 PM, Tuesday, February 6th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಕಡಬ : ಸಹಕಾರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಲಕ್ಷಾಂತರ ರೂಪಾಯಿಗಳನ್ನು ಸಾಲ ಪಡೆದು ಇಬ್ಬರು ವಂಚಿಸಿರುವುದಾಗಿ ದೂರು ದಾಖಲಾಗಿದೆ.

ನೆಲ್ಯಾಡಿ ಸಹಕಾರ ಸಂಘ, ಉಪ್ಪಿನಂಗಡಿಯ ಸಹಕಾರಿ ಸಂಘ, ಅಲಂಕಾರು ಸಹಕಾರಿ ಸಂಘಗಳಲ್ಲಿ ಇವರು ನಕಲಿ ಚಿನ್ನ ಅಡವಿಟ್ಟು ಲಕ್ಷಗಟ್ಟಲೆ ಹಣ ಪಡೆದ ಪ್ರಕರಣ ಬೆಳಕಿಗೆ ಬಂದಿದೆ.

ಇದೇ ಆರೋಪಿಗಳು ಜ. 27 ರಂದು ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಅಡಮಾನವಿರಿಸಿ, 1.40 ಲಕ್ಷ ರೂ.ವನ್ನು ಸಾಲವಾಗಿ ಪಡೆದು ಮೋಸ ಮಾಡಿರುವ ಬಗ್ಗೆ ಈಗಾಗಲೇ ದೂರು ದಾಖಲಾಗಿತ್ತು.ಇದೀಗ ಮತ್ತೆ ಉಪ್ಪಿನಂಗಡಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವ್ಯವಸ್ಥಾಪಕಿ ಕಮಲಾ ಎಂಬವರು ದೂರು ನೀಡಿದ್ದು, ಇಲ್ಲೂ ಈ ತಂಡ ನಕಲಿ ಚಿನ್ನಾಭರಣ ಇರಿಸಿ 1.70 ಲಕ್ಷ ರೂಪಾಯಿ ಹಣವನ್ನು ಪಡೆದು ವಂಚಿಸಿದ ಆರೋಪ ಕೇಳಿ ಬಂದಿದೆ. ಜ. 31 ರಂದು ಸಂಘದ ಕಚೇರಿಗೆ ಬಂದ ಇವರು ನಕಲಿ ಎಂದು ಕಂಡು ಬಾರದಂತಹ 40 ಗ್ರಾಮ್ ತೂಕದ 5 ನಕಲಿ ಬಳೆಗಳನ್ನು ಅಡಮಾನವಿರಿಸಿ 1.70 ಲಕ್ಷ ರೂ ಸಾಲ ಪಡೆದಿದೆ. ಅದೇ ರೀತಿಯಲ್ಲಿ ಕಡಬ ತಾಲೂಕಿನ ಅಲಂಕಾರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ ಇದರ ಶಾಖಾ ಪ್ರಬಂಧಕರಾದ ಶ್ರೀಮತಿ ರೇವತಿ ಎಂಬವರು ಕಡಬ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಇದೇ ಆರೋಪಿಗಳು ಜನವರಿ 30ರಂದು ಮದ್ಯಾಹ್ನ ಸಹಕಾರಿ ಸಂಘದ ಅಲಂಕಾರು ಶಾಖೆಗೆ ಬಂದು, ನಕಲಿಯೆಂದು ಕಂಡುಬಾರದಿರುವಂತಹ 30.200 ಗ್ರಾಂ ತೂಕದ 4 ಚಿನ್ನದ ಬಳೆಗಳನ್ನು ಅಡವಿರಿಸಿ‌, ರೂ 1ಲಕ್ಷದ 35 ಸಾವಿರ ಹಣವನ್ನು ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ನೆಲ್ಯಾಡಿ ಗ್ರಾಮದಾತ ಎನ್ನಲಾಗಿರುವ ಕಡಬ ನಿವಾಸಿ ಸೆಬಾಸ್ಟಿಯನ್ ಮತ್ತು ಕೇರಳ ಮೂಲದ ಡಾನಿಶ್ ಎಂಬವರು ವಂಚನೆಗೈದಿರುವ ಬಗ್ಗೆ ವಿವಿಧ ಠಾಣೆ ಗಳಲ್ಲಿ ದೂರುಗಳು ದಾಖಲಾಗಿದೆ. ಪ್ರಕರಣದಲ್ಲಿ ಸಂಘಗಳ ಚಿನ್ನಾಭರಣ ಪರಿಶೀಲನಾಗಾರರು ನಕಲಿ ಚಿನ್ನಾಭರಣವನ್ನು ಪರಿಶೀಲಿಸಿದ್ದು, ನೈಜ ಚಿನ್ನವೆಂದು ತಿಳಿಸಿರುವ ಬಗ್ಗೆಯೂ ತನಿಖೆಗಳು ನಡೆಯುತ್ತಿದೆ. ಈ ಆರೋಪಿಗಳಿಂದ ಇದೇ ರೀತಿ ಹಲವು ವಂಚನಾ ಪ್ರಕರಣಗಳು ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English