ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

10:11 PM, Tuesday, February 6th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಸಾಗಾಟ ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 120 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೇರಳದ ವಯನಾಡಿನ ಅನೂಪ್ ಎಂ.ಎಸ್(28), ಕೇರಳದ ಕಣ್ಣೂರಿನ ಲತೀಪ್ ಕೆ.ವಿ(36) ಬಂಧಿತರು.

ಮಂಗಳವಾರ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಪತ್ತೆ ಹಚ್ಚಿ ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದಇಬ್ಬರನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಶದಲ್ಲಿದ್ದ ಸಿಲ್ವರ್ ಬಣ್ಣದ ಮಹೇಂದ್ರ ಬೊಲೆರೋ ಕಾರು ಅನ್ನು ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ ರೂ. 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾವನ್ನು, 3 ಮೊಬೈಲ್ ಫೋನ್ ಗಳನ್ನು, ನಗದು ರೂ. 4020 ಸ್ವಾಧೀನಪಡಿಸಿಕೊಳ್ಳಲಾಗಿದೆ.

ಇನ್ನು ವಶಪಡಿಸಿಕೊಂಡ ಗಾಂಜಾ, ಮಹೇಂದ್ರ ಬೊಲೆರೋ ಜೀಪು, ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 35,14,520 ಆಗಿದೆ. ಆರೋಪಿಗಳು ಒರಿಸ್ಸಾದಿಂದ ಅಂಧ್ರಪ್ರದೇಶ, ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳಿಬ್ಬರೂ ಕೇರಳದ ರಾಜ್ಯದವರಾಗಿದ್ದು, ಕರ್ನಾಟಕ, ಕೇರಳ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಒರಿಸ್ಸಾ ರಾಜ್ಯದಿಂದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರಕ್ಕೆ ಹಾಗೂ ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದರು. ಗಾಂಜಾವನ್ನು ಕಳ್ಳ ಸಾಗಾಣಿಕೆ ಮಾಡುವ ಉದ್ದೇಶದಿಂದಲೇ ಆರೋಪಿಗಳು ಬೋಲೆರೋ ವಾಹನದ ಹಿಂಬದಿಯ ಡಿಕ್ಕಿಯಲ್ಲಿ ಪ್ರತ್ಯೇಕವಾದ ಒಂದು ಕಬ್ಬಿಣದ ಬಾಕ್ಸ್ ನ್ನು ಮಾಡಿಕೊಂಡು ಈ ಬಾಕ್ಸ್ ನಲ್ಲಿ ಗಾಂಜಾವನ್ನು ಬಚ್ಚಿಟ್ಟಿದ್ದರು. ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಅನೂಪ್ ಎಂಬಾತನ ವಿರುದ್ದ ಈ ಹಿಂದೆ ಮೈಸೂರು ಜಿಲ್ಲೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ನೇ ಇಸವಿಯಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿದೆ. ಅಲ್ಲದೇ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮೆಪ್ಪಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ, ವಯನಾಡು ಜಿಲ್ಲೆ ಕಲ್ಪಟ್ಟ ಪೊಲೀಸ್ ಠಾಣೆಯಲ್ಲಿ 2 ದರೋಡೆ ಪ್ರಕರಣ, ಒಂದು ಹಲ್ಲೆ ಪ್ರಕರಣ, ವಯನಾಡು ಜಿಲ್ಲೆಯ ಅಂಬಲವಯಲ್ ಪೊಲೀಸ್ ಠಾಣೆಯಲ್ಲಿ 2 ಕಳವು ಪ್ರಕರಣಗಳು ದಾಖಲಾಗಿದೆ.

ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ನರೇಂದ್ರ, ಸುದೀಪ್, ಶರಣಪ್ಪ ಭಂಡಾರಿ ಹಾಗೂ ಎಎಸ್ಐ ಯವರಾದ ಮೋಹನ್ ಕೆ ವಿ, ಶೀನಪ್ಪ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English