ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಸದಸ್ಯ ಮಧು ಜಿ ಮಾದೇಗೌಡ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿದರು. ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17, 2024ಕಕ್ಕೆ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ರಾಜ್ಯದಲ್ಲಿ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ಆದಷ್ಟು ಬೇಗ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ವಿವರಿಸಿದರು.
ನಕಲಿ ನಂಬರ್ ಪ್ಲೇಟ್, ವಾಹನಗಳನ್ನು ಕಾನೂನು ಬಾಹಿರ ಚಟುವಟಿಕೆಗೆ ಬಳಕೆ ಮಾಡುವುದನ್ನು ತಪ್ಪಿಸಲು ಹಾಗೂ ವಾಹನಗಳನ್ನು ಟ್ರಾಕ್ ಮಾಡಲು ಸೇರಿದಂತೆ ಹಲವು ಕಾರಣಗಳಿಂದ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗುತ್ತಿದೆ. ಈ ನಂಬರ್ ಪ್ಲೇಟ್ ಎಲ್ಲೆಂದರಲ್ಲಿ ಸಿಗುವುದಿಲ್ಲ. ಮದ್ಯವರ್ತಿಗಳ ಅವಶ್ಯಕತೆ ಇಲ್ಲ. ಸುಲಭವಾಗಿ HSRP ನಂಬರ್ ಪ್ಲೇಟ್ ಪಡೆಯಲು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
Click this button or press Ctrl+G to toggle between Kannada and English