ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಮುತ್ತಿಗೆ ಹಾಕಲು ಯತ್ನ

10:06 PM, Saturday, February 17th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಹೊರವಲಯ ಬೋಂದೆಲ್ ಬಳಿ ಇಂದು ನಡೆಯಿತು.

ಅಡ್ಯಾರ್ ನ ಸಹ್ಯಾದಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಕಾರನ್ನು ತಡೆದು ಮುತ್ತಿಗೆ ಹಾಕಲು ಯತ್ನಿಸಿದರು.

ಜೆರೋಸಾ ಶಾಲೆಯಲ್ಲಿ ನಡೆದ ಘಟನೆಯಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಹಾಗೂ ವೇದವ್ಯಾಸ್ ಕಾಮತ್ ಮೇಲೆ ವಿನಾಕಾರಣ ಮೇಲೆ ಎಫ್ಐಆರ್ ದಾಖಲಿಸಿದ್ದು, ಹಾಗೂ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದ್ದನ್ನು ಖಂಡಿಸಿ ಈ ಮುತ್ತಿಗೆ ಯತ್ನ ನಡೆಸಲಾಗಿತ್ತು.

ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English