ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: MDMA ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

9:15 PM, Friday, February 23rd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಮಂಗಳೂರು ತಾಲೂಕು ಪಡುಶೆಡ್ಡೆ ಗ್ರಾಮದ ಬೊಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿಯಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿರುತ್ತಾರೆ.

ಆರೋಪಿತನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದನು. ಆರೋಪಿತನಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಂಡಿರುತ್ತಾರೆ.
ಆರೋಪಿತನಿಂದ ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ವಿವರ

ಆರೋಪಿಯನ್ನು ಮೊಹಮ್ಮದ್ ರಿಜ್ವಾನ್, ಪ್ರಾಯ: 34 ವರ್ಷ, ತಂದೆ; ಅಬ್ದುಲ್ ರಹಿಮಾನ್, ವಾಸ; ಬದ್ರಿಯಾ ಮಂಜಿಲ್, ಮೂಡುಶೆಡ್ಡೆ, ಶಿವನಗರ, ಮಂಗಳೂರು ಎಂದು ಗುರುತಿಸಲಾಗಿದೆ.

ಈತನ ಮೇಲೆ ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಕೊಣಾಜೆ ಪೊಲೀಸ್ ಠಾಣೆ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆ, ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿರುತ್ತವೆ.

ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಶ್ರೀ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ರೀ ಶ್ಯಾಮ್ ಸುಂದರ್ ರವರ ನೇತೃತ್ವದಲ್ಲಿ ಈ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು .

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English