ದುಬೈನಲ್ಲಿ ರಸ್ತೆ ಅಪಘಾತ ಮಂಗಳೂರಿನ ಯುವತಿ ಸಾವು

9:25 PM, Friday, February 23rd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಉಳ್ಳಾಲ ಮೂಲದ ಯುವತಿ ಸಾವನ್ನಪ್ಪಿದ್ದಾರೆ.

ಉಳ್ಳಾಲ ತಾಲೂಕಿನ ಕೋಟೆಕಾರ್ ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ವಿಧಿವಶರಾದ ದುರ್ದೈವಿ. ಇವರು ಮಂಗಳೂರು ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷೆ ಬಿಜೆಪಿ ಮುಖಂಡೆ ರಾಜೀವಿ ಹಾಗೂ ವಿಠಲ ಕುಲಾಲ್ ದಂಪತಿಯ ಏಕೈಕ ಪುತ್ರಿ.

ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಬಳಿಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಒಂದು ವರ್ಷ ಕೆಲಸ ಮಾಡಿದ್ದರು. ಬಳಿಕ 2019 ರಿಂದ ದುಬೈಗೆ ತೆರಳಿ ಅಲ್ಲಿನ ಏರ್‌ಪೋರ್ಟ್ ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಪ್ರತಿದಿನ ಕಂಪನಿಯ ಕ್ಯಾಬ್ ನಲ್ಲೇ ಸಂಚರಿಸುತ್ತಿದ್ದ ವಿದಿಶಾ ಕ್ಯಾಬ್ ತಪ್ಪಿದ ಹಿನ್ನೆಲೆಯಲ್ಲಿ ತನ್ನ ಕಾರಿನಲ್ಲೇ ಸಂಚರಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ .ಗಂಭೀರವಾಗಿ ಗಾಯಗೊಂಡ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English