ಪತ್ರಕರ್ತ, ಕವಿ ಮನೋಹರ ಪ್ರಸಾದ್ ಇನ್ನಿಲ್ಲ

12:15 PM, Friday, March 1st, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಪತ್ರಕರ್ತ, ಕಾರ್ಯಕ್ರಮ ನಿರೂಪಕ, ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಇಂದು ಮುಂಜಾನೆ ನಿಧನರಾಗಿದ್ದಾರೆ.

ಮೂಲತಃ ಕಾರ್ಕಳ ತಾ| ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ ಸಲ್ಲಿಸಿ ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದಿದ್ದ ಅವರಿಗೆ ಕರ್ನಾಟಕ ರಾಜ್ಯೋ ತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ, ಕೆನರಾ ಬ್ಯಾಂಕ್ ಅಮೃತೋತ್ಸವ ಪುರಸ್ಕಾರ ಮೊದಲಾದ ಹಲವು ಗೌರವ ಗಳಿಗೆ ಭಾಜನರಾಗಿದ್ದಾರೆ.

ಮನೋಹರ್ ಪ್ರಸಾದ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಪಾರ್ಥಿವ ಶರೀರವು ಮಂಗಳೂರು ಕದ್ರಿಯ ಲೋಬೊ‌ ಲೇನ್‌ನ ಈಶಾ ಲ್ಯಾಂಡ್ ಟ್ರೇಡ್ಸ್ ಫ್ಲ್ಯಾಟ್‌ನಲ್ಲಿದೆ. ಮಧ್ಯಾಹ್ನ ತನಕ ಅಂತಿಮ ದರ್ಶನ ಅವಕಾಶವಿದೆ. ಬಳಿಕ ಧಾರ್ಮಿಕ ವಿಧಿ ವಿಧಾನಗಳು ನಡೆದು, ಸಂಜೆ ನಾಲ್ಕು ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್‌ಗೆ ತಂದು, ಶ್ರದ್ಧಾಂಜಲಿ ಸಲ್ಲಿಸಿ, ಬಳಿಕ ಕದ್ರಿ ಸ್ಮಶಾನದಲ್ಲಿ ಅಂತಿಮ‌ ಸಂಸ್ಕಾರ ನಡೆಯಲಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English