ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 5 ರಿಂದ ರಾತ್ರಿ ನಿರ್ಬಂಧ ಸಡಿಲಿಕೆ

9:25 PM, Thursday, August 4th, 2022
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧಿಸಲಾಗಿದ್ದ ರಾತ್ರಿ ನಿರ್ಬಂಧ ಕ್ರಮಗಳನ್ನು ಆ. 5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ.

ಆ. 5 ರಿಂದ ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9 ರವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು , ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. 144 ಸೆಕ್ಷನ್ ಅಡಿಯಲ್ಲಿ ವಿಧಿಸಲಾದ ನಿಷೇಧಾಜ್ಞೆ ಹಾಗೂ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರಿಯಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English