ಕಡಬ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ 4 ಲಕ್ಷ ರೂ ಪರಿಹಾರ

9:39 PM, Tuesday, March 5th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಮೂವರು ಕಾಲೇಜು ಎಂಬಿಎ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್(23) ಆಸಿಡ್ ಎರಚಿದ ಪ್ರಕರಣದ ಸಂತ್ರಸ್ತ ಬಾಲಕಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಇಂದು ಭೇಟಿ ಮಾಡಿದ್ದಾರೆ.

ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದಿದೆ. ಆ್ಯಸಿಡ್ ದಾಳಿಯಿಂದ ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡಿದ್ದರು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷರು ತಿಳಿಸಿದ್ದಾರೆ.

ನಗರದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿನಿಯರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಮಕ್ಕಳಲ್ಲಿ ಮನೋಧೈರ್ಯ ಜಾಸ್ತಿ ಇದೆ. ಒಮ್ಮೆ ಕನ್ನಡ ಪರೀಕ್ಷೆ ಬರೆದಿರುವ ವಿದ್ಯಾರ್ಥಿನಿಯರು ಮತ್ತೆ ಕನ್ನಡ ಪರೀಕ್ಷೆ ಬರೆಯಬೇಕಾ ಅಂತಾ ಪ್ರಶ್ನಿಸಿದ್ದಾರೆ. ಮಕ್ಕಳಿಗೆ ಬಾಕಿ ಉಳಿದ ಪರೀಕ್ಷೆ ಮಾಡುವ ಬಗ್ಗೆ ಶಿಕ್ಷಣ ಸಚಿವರ ಬಳಿ ಮಾತನಾಡುತ್ತೇವೆ ಎಂದರು.

ಘಟನೆಯಲ್ಲಿ ಒಬ್ಬಳು ವಿದ್ಯಾರ್ಥಿನಿಗೆ ಹೆಚ್ಚು ಗಾಯಗಳಾಗಿದ್ದು, ಇನ್ನಿಬ್ಬರಿಗೆ ಕಡಿಮೆ ಗಾಯಗಳಾಗಿವೆ. ಇಬ್ಬರಿಗೆ ಪ್ಲಾಸ್ಟಿಕ್ ಸರ್ಜರಿ ಅಗತ್ಯ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಮುಂದಿನ ಎರಡು ವಾರದ ಚಿಕಿತ್ಸೆ ಬಳಿಕ ಪ್ಲಾಸ್ಟಿಕ್ ಸರ್ಜರಿ ಬಗ್ಗೆ ವೈದ್ಯರು ನಿರ್ಧರಿಸಲಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಗೆ ಇಪ್ಪತ್ತು ಲಕ್ಷದ ತನಕವೂ ಚಿಕಿತ್ಸಾ ಪರಿಹಾರ ನೀಡುತ್ತೇವೆ.

ಆರೋಪಿ ಆ್ಯಸಿಡ್ ನ್ನು ಪ್ಲಾಸ್ಟಿಕ್ ಬಾಟಲ್ ನಲ್ಲಿ ತಂದಿದ್ದ ಅಂತಾ ಪೊಲೀಸರು ಹೇಳಿದ್ದಾರೆ.‌ ಆ್ಯಸಿಡ್ ತೀವ್ರ ಪ್ರಮಾಣದ್ದು ಆಗಿದ್ದರೆ ದೊಡ್ಡ ಮಟ್ಟದ ಗಾಯಗಳಾಗುತ್ತಿತ್ತು. ಎಲ್ಲಾ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English