ಮಂಗಳೂರು : ಆಟೋ ಚಾಲಕನಿಗೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ಬಿಸಿರೋಡಿನ ಕೈಕಂಬ ಎಂಬಲ್ಲಿ ಇಂದು ಸೋಮವಾರ ಬೆಳಿಗ್ಗೆ ನಡೆದಿದೆ.
ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದಾನೆ.
ಬಿಸಿ ರೋಡ್ನಲ್ಲಿ ಸಮವಸ್ತ್ರ ಧರಿಸದೆ ಮೊಬೈಲ್ನಲ್ಲಿ ಮಾತಾಡುತ್ತ ಆಟೋ ಚಲಾಯಿಸುತ್ತಿರುವುದನ್ನು ಗಮನಿಸಿದ ಟ್ರಾಫಿಕ್ ಪಿಎಸ್ಐ ಸುತೇಶ್ ಮತ್ತು ಸಿಬ್ಬಂದಿ ಆಟೋ ತಡೆದಿದ್ದಾರೆ. ಅಲ್ಲದೆ, ಸಂಚಾರಿ ನಿಯಮ ಉಲ್ಲಂಘಿಸಿದ ಹಿನ್ನೆಲೆ 2,000 ರೂಪಾಯಿ ದಂಡ ವಿಧಿಸಿದ್ದಾರೆ. ಇದರಿಂದ ಕೋಪಗೊಂಡ ಗೂಡಿನ ಬಳಿ ನಿವಾಸಿ ಆಟೋ ಚಾಲಕ ಮೊಹಮ್ಮದ್ ಅನ್ಸಾರ್, ಸಾರ್ವಜನಿಕವಾಗಿ ರಂಪಾಟ ನಡೆಸಿದ್ದಾನೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನ ಸುಟ್ಟುಹಾಕುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಆಟೋ ಹಾಗೂ ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಘಟನೆ ದೃಶ್ಯ ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ. ಪ್ರಕರಣ ಸಂಬಂಧ ಅನ್ಸಾರ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English