ಮಂಗಳೂರು : ರಾತ್ರಿ ವೇಳೆ ಪೊಲೀಸರು ಹಾಗೂ ಜೈಲುಸಿಬ್ಬಂದಿಗಳು ದಾಳಿ ನಡೆಸಿ ಕಿರುಕುಳ ನೀಡುತ್ತಿದ್ದಾರೆ, ಊಟ ಹಾಗು ಇತರೆ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಎ ಬ್ಲಾಕ್ನಲ್ಲಿರುವ ವಿಚಾರಣಾಧೀನ ಕೈದಿಗಳು ಬುಧವಾರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸಿದರು.
ಸುಮಾರು 90 ಕೈದಿಗಳು ಜಿಲ್ಲಾ ನ್ಯಾಯಾಧೀಶರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿ ಉಪವಾಸ ನಡೆಸಿದ್ದು, ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಉಪವಾಸ ನಡೆಸಿದರು. ಗುರುವಾರ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ನೀಡಿದ ಭರವಸೆ ಮೇರೆಗೆ ಉಪವಾಸ ಕೈಬಿಟ್ಟರು. ಈ ಸಂದರ್ಭ ಜೈಲರ್ ವಿಜಯ ಕುಮಾರ್ ಚೌಹಾಣ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English