ಮಾಜಿ ಸಿಎಂ ಡಿವಿ ಸದಾನಂದ ಗೌಡ ಕಾಂಗ್ರೆಸ್​ ಸೇರ್ಪಡೆ ಮುನ್ಸೂಚನೆ

12:54 PM, Wednesday, March 13th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಬೆಂಗಳೂರು : ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ 15 ಕ್ಕೆ ಬಿಡುಗಡೆಗೆ ಮುನ್ನವೇ ಬಿಜೆಪಿಯ ಹಲವಾರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ಸೂಚನೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರಿಗೆ ಒಂದೆಡೆ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ದೊರೆಯುತ್ತದೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಈ ಮಧ್ಯೆ, ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳೂ ಇವೆ ಎಂಬ ವದಂತಿಯೂ ಇದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸದಾನಂದ ಗೌಡ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಅನೇಕ ಜನ ಪಕ್ಷ ಸೇರ್ಪಡೆ ವಿಚಾರವಾಗಿ ನಮ್ಮನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿನ್ನೆ ಜಯಪ್ರಕಾಶ್ ಹೆಗ್ಡೆ, ಎಂಪಿಕೆ ನಮ್ಮ ಪಕ್ಷ ಸೇರಿದ್ದಾರೆ. ಇನ್ನೂ ಬಹಳ ಜನ ಪಕ್ಷಕ್ಕೆ ಬರುವವರಿದ್ದಾರೆ. ಅದರಲ್ಲಿ ಹಾಲಿ ಬಿಜೆಪಿ ಎಂಪಿಗಳು ಕೂಡ ಇದ್ದಾರೆ. ಈಗ ಅವರ ಹೆಸರು ಬಹಿರಂಗ ಪಡಿಸುವುದಿಲ್ಲ ಎಂದು ಹೇಳಿದ್ದಾರೆ.

ಸದಾನಂದ ಗೌಡರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದೀರಾ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆಯ ಬಳಿಕ ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಸದಾನಂದ ಗೌಡ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಕಳೆದ ವರ್ಷದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಊಹೋಪೋಹಗಳು ಹರಿದಾಡಿದ್ದವು. ವಿಧಾನಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರಕ್ಕೆ ಅಭ್ಯರ್ಥಿ ಹಾಕುವಲ್ಲಿ ಡಿಕೆ ಶಿವಕುಮಾರ್ ಮೇಲೆ ಸದಾನಂದ ಗೌಡ ಪ್ರಭಾವ ಬೀರಿದ್ದರು ಎಂಬ ಆರೋಪವೂ ಇತ್ತು. ಇದೇ ಕಾರಣಕ್ಕೆ ಅಲ್ಲಿ ಬಿಜೆಪಿಯಿಂದ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂಬ ಟೀಕೆಗಳು ಕೇಳಿಬಂದಿದ್ದವು.

ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮತ್ತೆ ಸದಾನಂದ ಗೌಡ ಕುರಿತ ವದಂತಿ ಹರಿದಾಡುತ್ತಿದೆ. ಈ ಮಧ್ಯೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಪಕ್ಷದ ನಾಯಕರೇ ನನ್ನ ಮೇಲೆ ಒತ್ತಡ ಹಾಕಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದ ನಾನು ನಾಯಕರ ಒತ್ತಡದಿಂದ ಆ ತೀರ್ಮಾನ ವಾಪಸ್ ಮಾಡಿದ್ದೆ. ಇದೀಗ ಟಿಕೆಟ್ ನೀಡದಿದ್ದರೆ ನೋವಾಗುತ್ತದೆ. ವೈಯಕ್ತಿಕ ವರ್ಚಸ್ಸಿಗೆ ಧಕ್ಕೆಯಾಗುತ್ತದೆ ಎಂದು ಸದಾನಂದ ಗೌಡ ಹೇಳಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English