ಉಡುಪಿ : ದೇಶದ ಸಂವಿಧಾನವನ್ನು ಬದಲಿಸುವ ಹುನ್ನಾರವನ್ನು ಬಿಜೆಪಿ ನಡೆಸಿದೆ. ಇದು ಬಿಜೆಪಿಯ ಹಿಡನ್ ಅಜೆಂಡಾ ಆಗಿದ್ದು, ದೇಶದ ಜನ ಇದನ್ನು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಬುಧವಾರ ಮಹಾತ್ಮ ಗಾಂಧಿ ಮೈದಾನದಲ್ಲಿ ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಸಂವಿಧಾನವನ್ನು ಬದಲಿಸುವುದಕ್ಕಾಗಿಯೇ ಅಧಿಕಾರಕ್ಕೆ ಬಂದಿರುವುದಾಗಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಇದೀಗ ಎರಡನೇ ಬಾರಿಗೆ ಹೇಳಿದ್ದಾರೆ. ಸಂವಿಧಾನದ ಬದಲು ಜಾರಿಗೊಳಿಸುವುದೇ ಬಿಜೆಪಿಯ ಹುನ್ನಾರ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಕಾರ್ಮಿಕರು, ಹಿಂದುಳಿದವರು ದೇಶದಲ್ಲಿ ಬದುಕಲು ಸಂವಿಧಾನ ಉಳಿಯಲೇ ಬೇಕು ಎಂದರು.
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಯೋಜನೆಗಳ ಶಂಕುಸ್ಥಾಪನೆ ಮಾಡಿದರು.
Click this button or press Ctrl+G to toggle between Kannada and English