ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ

8:30 PM, Saturday, March 16th, 2024
Share
1 Star2 Stars3 Stars4 Stars5 Stars
(5 rating, 1 votes)
Loading...

ಮಂಗಳೂರು : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ದೊರೆಯುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ.

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಬಿಜೆಪಿಯಿಂದ ಲೋಕಸಭೆ ಚುನಾವಣೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿಗಳಾಗಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ದೊರೆಯುವ ಸಾಧ್ಯತೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದಿದ್ದಾರೆ.

ಹಾಗೆ ಆಗಬೇಕು ಎಂದು ಏನಾದರೂ ಭಗವಂತನ ಇಚ್ಛೆ ಇದ್ದರೆ ಅದು ಆಗಿಯೇ ಆಗುತ್ತದೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ. ನಾನೂ ಸಂಪರ್ಕ ಮಾಡಿಲ್ಲ ಎಂದು ಸೂಲಿಬೆಲೆ ಹೇಳಿದ್ದಾರೆ.

ಮೈಸೂರಿನಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲಿದೆ ಎಂಬ ವಿಚಾರ ಸುದ್ದಿಯಾಗಿದ್ದಾಗಲೇ ಚಕ್ರವರ್ತಿಸೂಲಿಬೆಲೆ ಹೆಸರು ಕೂಡ ಆ ಕ್ಷೇತ್ರಕ್ಕೆ ಕೇಳಿಬಂದಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English