ಮಂಗಳೂರು : ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ವರದಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪುಸ್ತಕ ನೀಡುವ ಮೂಲಕ ಶುಭ ಹಾರೈಸಿದರು.
ಬೆಂಗಳೂರಿನ ಆರ್.ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
ಬಳಿಕ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿದ್ದು, ಇಂಡಿಯನ್ ಡಿಫೆನ್ಸ್ ಸ್ಟೇಟ್ ಸರ್ವಿಸ್ ನಲ್ಲಿ ತರಬೇತಿ ಪಡೆದಿದ್ದಾರೆ. ಇಂಡಿಯನ್ ರೆವೆನ್ಯೂ ಸರ್ವಿಸ್ ನಲ್ಲಿಯೂ ಸೇವೆ ಸಲ್ಲಿಸಿ, ಬಳಿಕ ಐ.ಎ.ಎಸ್ ಸೇವೆಗೆ 2023ರ ಬ್ಯಾಚ್ ನಲ್ಲಿ ಆಯ್ಕೆಯಾಗಿದ್ದಾರೆ. ಪಿ. ಶ್ರವಣ್ ಕುಮಾರ್ ಅವರು ರಾಯಚೂರು ಜಿಲ್ಲೆಯ ಕಲ್ಲೂರು ಗ್ರಾಮದವರು.
ತಂದೆ ಸಿ.ಐ.ಎಸ್.ಎಫ್ ನಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಆಗಿ ಹೈದ್ರಾಬಾದ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ಗೃಹಣಿಯಾಗಿದ್ದಾರೆ.
Click this button or press Ctrl+G to toggle between Kannada and English