ತಿರುವನಂತಪುರಂ: ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಕೊನೆಗೂ ಕೇರಳದಲ್ಲಿ ಬಿಜೆಪಿ ಖಾತೆ ತೆರೆದಿದೆ.
ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದ್ದು, ತ್ರಿಶ್ಯೂರ್‌ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯ ಗಳಿಸಿದ್ದಾರೆ. ಸುರೇಶ್ ಗೋಪಿ ಕಾಂಗ್ರೆಸ್‌ನ ಕೆ. ಮುರಳೀಧರನ್ ಮತ್ತು ಸಿಪಿಐಯ ವಿ.ಎಸ್. ಸುನೀಲ್ ಕುಮಾರ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಸುರೇಶ್ ಗೋಪಿ ಬರೊಬ್ಬರಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದು, ಇದು ಕೇರಳದಲ್ಲಿ ಬಿಜೆಪಿಯ ಮೊಟ್ಟ ಮೊದಲ ಗೆಲುವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಈ ಹಿಂದಿನ ಲೋಕಸಭೆ ಚುನಾವಣೆ (2019)ಯಲ್ಲಿಯೂ ಸುರೇಶ್ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿದ್ದರು. ಆ ಸಮಯದಲ್ಲಿ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು. ಕಾಂಗ್ರೆಸ್‌ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.
Click this button or press Ctrl+G to toggle between Kannada and English