ಉಡುಪಿ : ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿತ್ತು, ಫಲಿತಾಂಶ ಪ್ರಕಟವಾಗಿದೆ. ನೈರುತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್ನ ಭೋಜೇಗೌಡ ಭಾರೀ ಅಂತರದಿಂದ ಗೆಲವು ಸಾಧಿಸಿದ್ದಾರೆ.
ಮೊದಲ ಪ್ರಾಶಸ್ತ್ಯ ಮತದಲ್ಲೇ 5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ ಭೋಜೇಗೌಡ. ಒಟ್ಟು ಆಗಿದ್ದ ಮತ 19479 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ 18658 ಮತಗಳು ಸಿಂಧುವಾದರೆ, 821 ಕುಲಗೆಟ್ಟ ಮತಗಳ ಪಟ್ಟಿ ಸೇರಿದ್ದವು. 9,330 ಖೋಟಾ ನಿಗಧಿಯಾಗಿತ್ತು. ಭೋಜೇಗೌಡರು 9829 ಮತಗಳನ್ನ ಮೊದಲ ಪ್ರಾಶಸ್ತ್ಯದಲ್ಲೇ ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ಗೆ 4562 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ.
ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜಯಗಳಿಸಿದ ನಂತರ ಮಾತನಾಡಿದ, ಜೆಡಿಎಸ್ನ ಎಸ್ಎಲ್ ಭೋಜೇಗೌಡ, ಈ ಬಾರಿ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಬಹಳ ಅಭೂತಪೂರ್ವ ಗೆಲುವನ್ನು ತಂದು ಕೊಟ್ಟಿದ್ದಾರೆ. ಹಾಗಾಗಿ ಈ ಗೆಲುವನ್ನು ಶಿಕ್ಷಕ ಸಮುದಾಯಕ್ಕೆ ಸರ್ಮಪಿಸುತ್ತೇನೆ. ನಮ್ಮ ಶಿಕ್ಷಕರು ಬಹಳ ಶ್ರಮಪಟ್ಟು ಗೆಲುವನ್ನು ತಂದುಕೊಟ್ಟಿದ್ದಾರೆ. ಬಹಳ ವಿಶ್ವಾಸವಿಟ್ಟು ಮೊದಲ ಪ್ರಾಶಸ್ತ್ಯ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಹಾಗಾಗಿ ನನ್ನ ಗೆಲುವನ್ನು ಅವರಿಗೆ ಅರ್ಪಿಸುತ್ತೇನೆ ಎಂದರು.
ಮತ್ತೊಂದೆಡೆ ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆಯಲ್ಲಿ ಬಿಜೆಪಿಯ ಧನಂಜಯ್ ಸರ್ಜಿ 7800, ಕಾಂಗ್ರೆಸ್‌ನ ಆಯನೂರು ಮಂಜುನಾಥ್ 5,200, ಪ್ರಮುಖ ಸ್ವತಂತ್ರ ಅಭ್ಯರ್ಥಿ ರಘುಪತಿ ಭಟ್ 4000 ಮತಗಳನ್ನು ಪಡೆದಿದ್ದಾರೆ.
Click this button or press Ctrl+G to toggle between Kannada and English