ಮಂಗಳೂರು ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದಲ್ಲಿ ಚುನಾವಣಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

5:10 PM, Tuesday, April 2nd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು.

ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English