ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

5:24 PM, Thursday, April 4th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಮುನ್ನ ಸಮೀಪದ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ , ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ಪ್ರಮೋದ್ ಮಧ್ವರಾಜ್ಜೆ, ಸಿ.ಟಿ ರವಿ, ರಾಜೇಶ್ ನಾಯ್ಕ್ ಉಳೆಪಾಡಿ, ಜೆ ಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English