ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

6:17 PM, Wednesday, April 3rd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಬುಧವಾರ ಏಪ್ರಿಲ್ 3 ರಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮುನ್ನ ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರೆ ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್. ಮತ್ತು ನಾಯಕರು ಇದ್ದರು.

ಹಿರಿಯ ರಾಜಕಾರಣಿ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಆಶೀರ್ವಾದ ಪಡೆದುಕೊಂಡು ಬಳಿಕ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ಅವರು, ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಮೆರವಣಿಗೆಯಲ್ಲಿ ತುಳುನಾಡ ಧ್ವಜ ರಾರಾಜಿಸುತ್ತಿತ್ತು. ಕಾಂಗ್ರೆಸ್ ಧ್ವಜದೊಂದಿಗೆ ಕಾರ್ಯಕರ್ತರ ಘೋಷಣೆ, ಕೂಗಿ ಮೆರವಣಿಗೆ ಸಾಗಿದರು.

ಈ ಸಂದರ್ಭ ಕಾಂಗ್ರೆಸ್ ರಾಜ್ಯ ಚುನಾವಣಾ ಉಸ್ತುವಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಜಿಲ್ಲಾ ಚುನಾವಣಾ ಉಸ್ತುವಾರಿ ಬಿ. ರಮಾನಾಥ ರೈ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English