ನೇಪಾಳ ಮೂಲದ ಅಪ್ರಾಪ್ತ ಬಾಲಕಿ, ತೊಕ್ಕೊಟ್ಟು ಸಮೀಪದ ಮನೆಯಲ್ಲಿ ಆತ್ಮಹತ್ಯೆ

11:55 PM, Saturday, June 8th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ತೊಕ್ಕೊಟ್ಟು, ಚೆಂಬುಗುಡ್ಡೆಯ ಮನೆಯೊಂದರಲ್ಲಿ ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತ ಬಾಲಕಿ.

ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನಾ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನ ಮಂಗಳೂರಲ್ಲೇ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು. ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸೋದಾಗಿ ಹಠ ಹಿಡಿದಿದ್ದು ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದಳು ಎನ್ನಲಾಗಿದೆ.

ಶನಿವಾರ ಮಧ್ಯಾಹ್ನ ರಬೀನಳ ತಾಯಿ‌ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರೆತರಲು ಹೋಗಿದ್ದ ವೇಳೆ ರಬೀನಾ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಳ್ಳಾಲ ಠಾಣೆ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಬೀನ ತಂದೆ, ತಾಯಿ, ಇಬ್ಬರು ಸಹೋದರಿಯರು, ಓರ್ವ ಸಹೋದರನನ್ನ ಅಗಲಿದ್ದಾಳೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English