- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಎಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ

[1]

ಮಂಗಳೂರು: ಎಪ್ರಿಲ್ 14ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಗೆ ಸಂಜೆ 3ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಕರ್ನಾಟಕ ಚುನಾವಣಾ ಪ್ರವಾಸದ ಹಿನ್ನೆಲೆಯಲ್ಲಿ ಆಗಮಿಸುತ್ತಿರುವ ನರೇಂದ್ರ ಮೋದಿ ಎ.14ರಂದು ಮಂಗಳೂರಿನ ಕಾರ್ಯಕ್ರಮ ಮುಗಿಸಿ ಸಂಜೆ 5.30ಕ್ಕೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ದಲ್ಲಿ ಭಾಗವಹಿಸಲಿದ್ದಾರೆ ಎಂದು ಸುನಿಲ್ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಿಕಟ ಪೂರ್ವ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.