ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಮರು ರಂಜಾನ್ ಹಬ್ಬವನ್ನು ಬುಧವಾರ ಆಚರಿಸಿದರು.
ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು ಕೇಂದ್ರ ಜುಮ್ಮಾ ಮಸೀದಿ ಬಂದರು ದಕ್ಷಿಣಕನ್ನಡ ಜಿಲ್ಲಾ ಖಾಝಿಯವರಾದ ತ್ವಾಕ ಅಹಮದ್ ಮುಸ್ಲಿಯಾರ್ ಅವರು ಬುಧವಾರ ಘೋಷಿಸಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರಂಜಾನ್ ಆಚರಿಸಿದ್ದಾರೆ.
ಮುಸ್ಲಿಮರು ಇಂದು ಬೆಳಗ್ಗೆ ಮಸೀದಿಗೆ ತೆರಳಿ ನಮಾಜ್ ಸಲ್ಲಿಸಿದರು. ಹೊಸ ಬಟ್ಟೆಗಳನ್ನು ಧರಿಸಿ ಸಂಭ್ರಮಿಸಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಮಸೀದಿಯಲ್ಲಿ ನಡೆದ ನಮಾಜ್ನಲ್ಲಿ ಪಾಲ್ಗೊಂಡರು.
ರಂಜಾನ್ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ನಿಗದಿತ ಪರೀಕ್ಷೆಗಳು ಬಿಟ್ಟು, ಉಳಿದಂತೆ ಸರಕಾರಿ ಕಚೇರಿಗಳು ಮುಚ್ಚಿರುತ್ತವೆ. ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ಮನವಿಯಂತೆ ಸರಕಾರದ ಅಧೀನ ಕಾರ್ಯದರ್ಶಿ ವಿಜಯ ಕುಮಾರ್ ಎಚ್.ಬಿ. ಆದೇಶ ಹೊರಡಿಸಿದ್ದಾರೆ.
ಈದ್ ಉಲ್ ಫಿತರ್, ಯುಗಾದಿ, ಈಸ್ಟರ್ ಹಬ್ಬದ ಸಂದೇಶಗಳು ಕೂಡ ಶಾಂತಿ ಸಹಬಾಳ್ವೆಯ ಸಂದೇಶ ನೀಡುತ್ತದೆ. ಸ್ಪೀಕರ್ ಯು.ಟಿ. ಖಾದರ್, ಈ ಸಂಧರ್ಭ ಹೇಳಿದರು.